ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷರ ವಿರುದ್ಧ ವಿನೇಶ್ ಫೋಗಟ್ ಲೈಂಗಿಕ ಕಿರುಕುಳದ ಆರೋಪ: ದೆಹಲಿಯಲ್ಲಿ ಪ್ರತಿಭಟನೆ

Wrestlers protest: Vinesh Phogat accuses WFI president Brij Bhushan Sharan of sexual harassment

ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಭಾರೀ ವಿವಾದವೊಂದರಲ್ಲಿ ಸಿಲುಕಿದ್ದು ಭಾರತದ ಸ್ಟಾರ್ ಆಟಗಾರರು ಫೆಡರೇಶನ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಭಾರತದ ಸ್ಟಾರ್ ರೆಸ್ಲರ್ ವಿನೇಶ್ ಫೋಗಟ್ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ.

ಬುಧವಾರ ಬೆಳಗ್ಗೆಯಿಂದಲೇ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತದ ಸ್ಟಾರ್ ರೆಸ್ಲರ್‌ಗಳು ಭಾರತೀಯ ರೆಸ್ಲಿಂಗ್ ಫೆಡರೇಶನ್ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದರು. ಭಾರತದ ಅಗ್ರ ರೆಸ್ಲರ್‌ಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರೆಸ್ಲರ್‌ಗಳನ್ನು ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ನ್ಯಾಯಕ್ಕಾಗಿ ಬೇಡಿಕೆಯಿಟ್ಟಿದ್ದರು.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಭವಿಷ್ಯದ ಕುರಿತು ಸುನಿಲ್ ಗವಾಸ್ಕರ್ ಹೇಳಿದ್ದೇನು?ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಭವಿಷ್ಯದ ಕುರಿತು ಸುನಿಲ್ ಗವಾಸ್ಕರ್ ಹೇಳಿದ್ದೇನು?

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿರುವ ವಿನೀಶ್ ಫೋಗಟ್ ರೆಸ್ಲಿಂಗ್ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ರೆಸ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ವಿನೇಶ್ ಫೋಗಟ್ ಸ್ವತಃ ತನಗೆ ಬ್ರಿಜ್ ಭೂಷಣ್ ಮಾನಸಿಕ ಹಿಂಸೆಯನ್ನು ಕೂಡ ನೀಡುತ್ತಿದ್ದು ಆತ್ಮಹತ್ಯೆಗೂ ತಾನು ಪ್ರಯತ್ನಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆಯಾಗಿರುವ ವಿನೀಶ್ ಫೋಗಟ್ ಈ ಹಿಂದೆ ಲೈಂಗಿಕ ಕಿರುಕುಳದ ವಿರುದ್ಧ ಮಾತನಾಡದಂತೆ ತಮ್ಮನ್ನು ಮೌನವಾಗಿರಿಸಲಾಗಿತ್ತು ಎಂದಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತರಾಗಿರುವ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಸೇರಿದಂತೆ ಒಟ್ಟು 31 ರೆಸ್ಲರ್‌ಗಳು ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ರೆಸ್ಲರ್‌ಗಳು ಡಬ್ಲ್ಯುಎಫ್‌ಐ ಆಡಳಿತದಲ್ಲಿ ಬದಲಾವಣೆಗೆ ಒತ್ತಾಯಿಸಿದ್ದು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಮನವಿ ಮಾಡಿದರು.

ಪ್ರಸ್ತುತ ಇಂಡಿಯನ್ ರೆಸ್ಲಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೋಕಸಭಾ ಪ್ರತಿನಿಧಿಕೂಡ ಹೌದು. ಉತ್ತರ ಪ್ರದೇಶದ ಕೈಸೆರ್ಗಿನಿ ಕ್ಷೇತ್ರವನ್ನು ಪ್ರತಿನಿಧಿಸುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯನ್ನು ಪ್ರತಿನಿಧಿಸುತ್ತಿದ್ದಾರೆ.

Story first published: Wednesday, January 18, 2023, 20:28 [IST]
Other articles published on Jan 18, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X