Novak Djokovic: ಸೆಮಿಫೈನಲ್ ಪ್ರವೇಶಿಸುತ್ತಿದ್ದಂತೆ ಇತಿಹಾಸ ಬರೆದ ಜೋಕೊ
ವಿಶ್ವದ ನಂಬರ್ ಮಾಜಿ ನಂಬರ್ ಒನ್ ಟೆನಿಸ್ ಆಟಗಾರ ನೋವಾಕ್ ಜೋಕೊವಿಚ್ ತಮ್ಮ ಭರ್ಜರಿ ಫಾರ್ಮ್ ಮುಂದುವರೆಸಿದ್ದಾರೆ. ವಿಂಬಲ್ಟನ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲುವು ದಾಖಲಿಸಿದ ಸರ್ಬಿಯಾದ ಸ್ಟಾರ್ ಪ್ಲೇಯರ್ ನವ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 25ನೇ ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿ ಗೆಲ್ಲುವ ಇವರ ಕನಸು ಇನ್ನು ಹತ್ತಿರ ಬಂದಂತೆ ಆಗಿದೆ.
ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೋವಾಕ್ 6-7, 6-2, 7-5, 6-4ರಿಂದ ಇಟಲಿಯ ಫ್ಲೇವಿಯೊ ಕೊಬೊಲ್ಲಿ ಅವರನ್ನು ಸೋಲಿಸುವ ಮೂಲಕ ವಿಂಬಲ್ಡನ್‌ನಲ್ಲಿ ದಾಖಲೆಯ 14 ನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಇವರು ಸ್ಟಾರ್ ಆಟಗಾರ ರೋಜರ್ ಫೆಡರರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ರೋಜರ್ ಫೆಡರರ್ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಒಟ್ಟು 13 ಬಾರಿ ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದ ದಾಖಲೆಯನ್ನು ಹೊಂದಿದ್ದರು.

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊದಲ ಸೆಟ್ ಗೆಲ್ಲುವಲ್ಲಿ ಇಟಲಿಯ ಆಟಗಾರ ಯಶಸ್ವಿಯಾದರು. ಆದರೆ ಮುಂದಿನ ಮೂರು ಸೆಟ್‌ಗಳಲ್ಲಿ ನೋವಾಕ್ ತಮ್ಮ ಅಮೋಘ ಅನುಭವದ ಲಾಭ ಪಡೆದು ಆಡಿದರು. ಅಲ್ಲದೆ ಎದುರಾಳಿಗೆ ಸುಲಭವಾಗಿ ಅಂಕಗಳನ್ನು ನೀಡದೆ ಕಟ್ಟಿ ಹಾಕಿದರು. ನೋವಾಕ್ ಮೂರನೇ ಸೆಟ್‌ನಲ್ಲಿ ಟ್ರೈ ಬ್ರೇಕ್‌ನಲ್ಲಿ ಹೋರಾಡಿ ಅರ್ಹ ಜಯ ದಾಖಲಿಸಿದರು.
ನೋವಾಕ್ ಜೋಕೊವಿಚ್ ಅವರು ಈ ಮೊದಲು 2011, 2014, 2015, 2018, 2019, 2021, 2022ರಲ್ಲಿ ವಿಂಬಲ್ಡನ್ ಟೂರ್ನಿಯ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದ್ದರು. ಜೋಕೊ ನಾಲ್ಕರ ಘಟ್ಟದ ಪಂದ್ಯದಲ್ಲಿ ಇಟಲಿಯ ಜಾನಿಕ್ ದಿ ಸಿನ್ನರ್ ಅವರ ವಿರುದ್ಧ ಕಾದಾಟ ನಡೆಸಲಿದ್ದಾರೆ. ಜಾನಿಕ್ ದಿ ಸಿನ್ನರ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 7-6, 604, 6-4 ಸೆಟ್‌ಗಳಿಂದ ಅಮೆರಿಕದ ಬೆನ್ ಶೆಲ್ಟನ್ ಅವರನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಕಾರ್ಲೋಸ್ ಅಲ್ಕರಾಜ್‌ಗೆ ಜಯ
ಇದಕ್ಕೂ ಮೊದಲು ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದರು. ಇವರು ಬ್ರಿಟನ್‌ನ ಕ್ಯಾಮರೂನ್ ನಾರ್ರಿಯನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಸೆಮಿಫೈನಲ್‌ಗೆ ಟಿಕೆಟ್ ಪಡೆದರು. ಮಹಿಳೆಯರ ಸಿಂಗಲ್ಸ್‌ನಲ್ಲಿ ಇಗಾ ಸ್ವಿಯಾಟೆಕ್ ಟೂರ್ನಿಯಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಇವರು 19 ನೇ ಶ್ರೇಯಾಂಕಿತ ಲುಡ್ಮಿಲಾ ಸ್ಯಾಮ್ಸೊನೊವಾ ಅವರನ್ನು ಎರಡು ನೇರ ಸೆಟ್‌ಗಳಲ್ಲಿ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications