ಕೊರೊನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಪಿವಿ ಸಿಂಧು 10 ಲಕ್ಷ ದೇಣಿಗೆ

ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಭಾರತದಲ್ಲೂ ವ್ಯಾಪಕವಾಗಿ ಹರಡುತ್ತಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿದರು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಈ ಮಧ್ಯೆ ಈ ಮಹಾ ಸಾಂಕ್ರಾಮಿಕ ರೋಗದ ಕಡಿವಾಣಕ್ಕೆ ಸರ್ಕಾರಗಳ ಜೊತೆಗೆ ಕ್ರೀಡಾಲೋಕದ ತಾರೆಯರೂ ಕೈ ಜೋಡಿಸುತ್ತಿದ್ದಾರೆ. ಭಾರತದ ಟೆನ್ನಿಸ್ ತಾರೆ ಪಿವಿ ಸಿಂಧು ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ಕಾರದ ಜೊತೆಗೆ ಕೈ ಜೋಡಿಸಿದ್ದಾರೆ.

50 ಲಕ್ಷ ರೂ. ಮೌಲ್ಯದ ಅಕ್ಕಿ ದಾನ ಮಾಡಲಿದ್ದಾರೆ ಸೌರವ್ ಗಂಗೂಲಿ

ಪಿವಿ ಸಿಂಧು ಹತ್ತು ಲಕ್ಷರೂಪಾಯಿಯನ್ನು ಸರ್ಕಾರಕ್ಕೆ ನೀಡಿದ್ದಾರೆ. ತಲಾ ಐದು ಲಕ್ಷ ರೂಪಾಯಿಯಂತೆ ತೆಲಂಗಾಣ ಹಾಗೂ ಆಂಧ್ರಪ್ರದೇಶ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಿವಿ ಸಿಂದು ಹಣವನ್ನು ದೇಣಿಗೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಪಿವಿ ಸಿಂಧು "ಕೋವಿಡ್‌-19 ಸೋಂಕು ವಿರುದ್ಧದ ಹೋರಾಟಕ್ಕೆ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಎರಡೂ ಸರ್ಕಾರಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 5 ಲಕ್ಷ ರೂ. ಗಳನ್ನು ದೇಣಿಗೆ ನೀಡಿದ್ದೇನೆ" ಎಂದು ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ಕೊರೊನಾವೈರಸ್‌ಗೆ ಮಾಜಿ ಫುಟ್ಬಾಲ್ ಆಟಗಾರ ಮೊಹಮ್ಮದ್ ಫರಾಹ್ ಸಾವು

ವಿಶ್ವಾದ್ಯಂತ ಕೊರೊನಾ ವೈರಸ್‌ಗೆ 4,00,000 ಲಕ್ಷ ಜನರು ತುತ್ತಾಗಿದ್ದು 21,000ದಷ್ಟು ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಭಾರತದಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಸಂಖ್ಯೆ 600 ದಾಟಿದೆ. ಭಾರತದಲ್ಲಿ ಈವರೆಗೂ 13 ಮಂದಿ ಕೊರೊನಾಗೆ ಪ್ರಾಣವನ್ನು ಕಳೆದುಕೊಂಡಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Thursday, March 26, 2020, 20:05 [IST]
Other articles published on Mar 26, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X