ನವದೆಹಲಿ, ಏ. 13: ಮಹಿಳೆಯರ ಡಬಲ್ಸ್ ಇತಿಹಾಸದಲ್ಲಿ ಭಾರತದ ಸಾನಿಯಾ ಮಿರ್ಜಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಮಹಿಳೆಯರ ವಿಭಾಗಲ್ಲಿ ಇದೇ ಮೊದಲ ಬಾರಿಗೆ ಸಾನಿಯಾ ಮೊದಲ ಸ್ಥಾನಕ್ಕೇರಿದ್ದಾರೆ. ಶ್ರೇಯಾಂಕದಲ್ಲಿ ಮೊದಲ ಸ್ಥಾನ ಗಳಿಸಿದ ಭಾರತದ ವನಿತೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
ಮಾರ್ಟಿನಾ ಹಿಂಗಿಸ್ ಅವರೊಂದಿಗೆ ಅಮೆರಿಕದ ಚಾರ್ಲ್ಸ್‌ಟನ್‌ನಲ್ಲಿ ನಡೆದ ಡಬ್ಲ್ಯುಟಿಎ ಫ್ಯಾಮಿಲಿ ಸರ್ಕಲ್ ಕಪ್ ಟೆನಿಸ್ ಪಂದ್ಯಾವಳಿಯ ಡಬಲ್ಸ್ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಶ್ರೇಯಾಂಕದಲ್ಲಿ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.[ಬರಲಿದೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ಆತ್ಮಕಥೆ]
