ಟೋಕಿಯೋದಲ್ಲಿ ಭಾರತ ಪರ ಕಣಕ್ಕಿಳಿಯಲಿದ್ದಾರೆ ಸಾನಿಯಾ ಮಿರ್ಝಾ-ಅಂಕಿತಾ ರೈನಾ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಖ್ಯಾತ ಟೆನಿಸ್ ತಾರೆಯರಾದ ಸಾನಿಯಾ ಮಿರ್ಝಾ ಮತ್ತು ಅಂಕಿತಾ ರೈನಾ ಟೆನಿಸ್ ಮಹಿಳಾ ಡಬಲ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ಅಥ್ಲೀಟ್‌ಗಳ ಪಟ್ಟಿಯನ್ನು ಇಂಡಿಯನ್ ಒಲಿಂಪಿಕ್ಸ್ ಅಸೋಸಿಯೇಶನ್ ಪ್ರಕಟಿಸಿದ್ದು ಈ ಪಟ್ಟಿಯಲ್ಲಿ ಮಿರ್ಝಾ, ಅಂಕಿತಾ ಹೆಸರುಗಳಿವೆ.
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸಾನಿಯಾ ಮಿರ್ಝಾ ಭಾರತವನ್ನು ಪ್ರತಿನಿಧಿಸಿದರೆ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ನಾಲ್ಕು ಬಾರಿ ಪ್ರತಿನಿಧಿಸಿದ ಭಾರತದ ಮೊದಲ ಮಹಿಳೆಯಾಗಿ ಸಾನಿಯಾ ಮಿರ್ಝಾ ಗುರುತಿಸಿಕೊಂಡಿದ್ದಾರೆ. ಇತ್ತ ಅಂಕಿತಾ ರೈನಾ ಒಲಿಂಪಿಕ್ಸ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಇಬ್ಬರೂ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಬಗ್ಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. 'ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಟೆನಿಸ್ ಡಬಲ್ಸ್‌ನಲ್ಲಿ ಭಾರತ ಪ್ರತಿನಿಧಿಸಲಿರುವ ಸಾನಿಯಾ ಮಿರ್ಝಾ ಮತ್ತು ಅಂಕಿತಾ ರೈನಾಗೆ ಅಭಿನಂದನೆಗಳು' ಎಂದು ರಿಜಿಜು ಬರೆದುಕೊಂಡಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ 2021 ಇದೇ ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್‌ನ ಟೋಕಿಯೋದಲ್ಲಿ ನಡೆಯಲಿದೆ. ಅಸಲಿಗೆ ಈ ಕ್ರೀಡಾಕೂಟ 2020ರಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಕಾರಣದಿಂದಾಗಿ ಒಂದು ವರ್ಷ ತಡವಾಗಿ ನಡೆಯುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications