For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್: ಸ್ವಿಟ್ಜರ್‌ಲ್ಯಾಂಡ್‌ನ ಬೆಲಿಂಡಾ ಬೆನ್ಸಿಕ್ ಮಹಿಳಾ ಟೆನಿಸ್ ಚಾಂಪಿಯನ್

Tokyo Olympics: Switzerlands Belinda Bencic beats Vondrousova to win tennis title

ಟೋಕಿಯೋ: ಸ್ವಿಟ್ಜರ್‌ಲ್ಯಾಂಡ್ ಅಟಗಾರ್ತಿ ಬೆಲಿಂಡಾ ಬೆನ್ಸಿಕ್ ಟೋಕಿಯೋ ಒಲಿಂಪಿಕ್ಸ್ ಮಹಿಳಾ ಟೆನಿಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಬೆನ್ಸಿಕ್, ಝೆಕ್ ಆಟಗಾರ್ತಿ ಮಾರ್ಕೆಟಾ ವೊಂಡ್ರೊಸೊವಾ ಎದುರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬೆನ್ಸಿಕ್, ಟೋಕಿಯೋ ಒಲಿಂಪಿಕ್ಸ್‌ನ ಮಹಿಳಾ ಸಿಂಗಲ್ಸ್‌ನಲ್ಲಿ ಬಂಗಾರ ಗೆದ್ದ ಚೊಚ್ಚಲ ಸ್ವಿಟ್ಜರ್‌ಲ್ಯಾಂಡ್ ಆಟಗಾರ್ತಿಯಾಗಿ ದಾಖಲೆ ನಿರ್ಮಿಸಿದ್ದಾರೆ.

ಶನಿವಾರ (ಜುಲೈ 31) ನಡೆದ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಬೆಲಿಂಡಾ ಬೆನ್ಸಿಕ್ ಅವರು ಮಾರ್ಕೆಟಾ ವೊಂಡ್ರೊಸೊವಾ ವಿರುದ್ಧ 7-5, 2-6, 6-3ರ ಅಂತರದ ಗೆಲುವು ಕಂಡಿದ್ದಾರೆ. ಇಬ್ಬರ ಮಧ್ಯೆ ಸುಮಾರು 2 ಗಂಟೆ 30 ನಿಮಿಷಗಳ ಕಾದಾಟ ನಡೆಯಿತು. ಪಂದ್ಯ ಗೆದ್ದು 24ರ ಹರೆಯದ ಬೆನ್ಸಿಕ್ ಚಿನ್ನದ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಬೆನ್ಸಿಕ್ ಅವರು ಆಗಸ್ಟ್ 1ರಂದು ನಡೆಯುವ ಮಹಿಳಾ ಡಬಲ್ಸ್‌ನಲ್ಲೂ ಸ್ಪರ್ಧಿಸಲಿದ್ದಾರೆ. ವಿಕ್ಟೋರಿಜಾ ಗೊಲುಬಿಕ್ ಮತ್ತು ಬೆನ್ಸಿಕ್ ಜೋಡಿ ಝೆಕ್‌ನ ಜೆಕ್ ಬಾರ್ಬೊರಾ ಕ್ರೆಜಿಕೋವಾ ಮತ್ತು ಕತರೀನಾ ಸಿನಿಕೋವಾ ಎದುರು ಸ್ಪರ್ಧಿಸಲಿದ್ದಾರೆ.

ಸಿಂಗಲ್ಸ್‌ನಲ್ಲಿ ಗೆದ್ದಿರುವ ಬೆನ್ಸಿಕ್ ಡಬಲ್ಸ್‌ನಲ್ಲೂ ಗೆದ್ದರೆ ಒಲಿಂಪಿಕ್ಸ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಆಟಗಾರ್ತಿಯಾಗಿ ಬೆನ್ಸಿಕ್ ದಾಖಲೆ ನಿರ್ಮಿಸಲಿದ್ದಾರೆ.ಇದಕ್ಕೂ ಮುನ್ನ ಅಮೆರಿಕಾದ ಸಹೋದರಿಯರ ಜೋಡಿಯಾದ ಸೆರೆನಾ ವಿಲಿಯಮ್ಸ್ ಮತ್ತು ವೀನಸ್ ವಿಲಿಯಮ್ಸ್, ಚಿಲಿ ದೇಶದ ನಿಕೋಲಸ್ ಮಸ್ಸು ಈ ದಾಖಲೆ ಹೊಂದಿದ್ದಾರೆ.

ಭಾರತಕ್ಕೆ ಒಂದು ಬೆಳ್ಳಿ, ಒಂದು ಕಂಚಿನ ಪದಕ
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳಾ ವೇಟ್ ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದು ಬಿಟ್ಟರೆ ಪಿವಿ ಸಿಂಧು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಗೆದ್ದಿರುವ ಕಂಚಿನ ಪದಕ ಮಾತ್ರ ಇದೆ. 1 ಆಗಸ್ಟ್ 7.30 PM ವೇಳೆ ಭಾರತದ ಖಾತೆಯಲ್ಲಿ ಒಂದು ಬೆಳ್ಳಿ, ಒಂದು ಕಂಚಿನ ಪದಕ ಮಾತ್ರ ಇತ್ತು. ಆದರೆ ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿರುವ ಲವ್ಲಿನಾ ಬೊರ್ಗೊಹೈನ್ ಈಗಾಗಲೇ ಭಾರತಕ್ಕೆ ಮತ್ತೊಂದು ಪದಕ ಖಾತರಿಪಡಿಸಿದ್ದಾರೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವ್ಲಿನಾ ಬೊರ್ಗೊಹೈನ್ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 4-1 ಅಂತರದಲ್ಲಿ ಜಯ ಗಳಿಸಿದ್ದರು. ಅದು ಬಿಟ್ಟರೆ ಮಹಿಳಾ ಡಿಸ್ಕಸ್ ಥ್ರೋನಲ್ಲಿ ಪದಕ ಸಿಗುವ ನಿರೀಕ್ಷೆಯಿದೆ. ಉಳಿದಂತೆ ಶೂಟಿಂಗ್, ಆರ್ಚರಿ, ಟೆನಿಸ್, ಜಿಮ್ನ್ಯಾಸ್ಟಿಕ್, ಸ್ವಿಮ್ಮಿಂಗ್, ಫೆನ್ಸಿಂಗ್, ಟೇಬಲ್ ಟೆನಿಸ್ ಇತ್ಯಾದಿ ಸ್ಪರ್ಧೆಗಳಲ್ಲಿ ಭಾರತಕ್ಕೆ ಪದಕದಾಸೆ ಇಲ್ಲವಾಗಿದೆ.

ಭಾರತೀಯ ತಂಡದ ಬಗ್ಗೆ ಸಂಕ್ಷಿಪ್ತ ಮಾಹಿತಿ
ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದಿಂದ ಒಟ್ಟು 127 ಅಥ್ಲೀಟ್‌ಗಳು ತೆರಳಿದ್ದಾರೆ. ಇದರಲ್ಲಿ ಅಧಿಕಾರಿಗಳು, ಸಿಬ್ಬಂದಿಗಳೂ ಸೇರಿ ಒಟ್ಟಾರೆ 228 ಮಂದಿಯ ಬೃಹತ್ ತಂಡ ಪ್ರತಿಷ್ಠಿತ ಕ್ರೀಡಾಕೂಟಕ್ಕಾಗಿ ಟೋಕಿಯೋಗೆ ತೆರಳಿತ್ತು. ಒಲಿಂಪಿಕ್ಸ್ ಇತಿಹಾಸದಲ್ಲಿ ಪಾಲ್ಗೊಳ್ಳುತ್ತಿರುವ ಅತೀ ದೊಡ್ಡ ಭಾರತೀಯ ತಂಡವಿದು. ಒಟ್ಟು 17 ಕ್ರೀಡಾಸ್ಪರ್ಧೆಗಳಲ್ಲಿ ಭಾರತೀಯರು ಸ್ಪರ್ಧಿಸುತ್ತಿದ್ದಾರೆ. ಹಿಂದಿ ರಿಯೋ ಒಲಿಂಪಿಕ್ಸ್‌ನಲ್ಲಿ ಒಟ್ಟು 117 ಅಥ್ಲೀಟ್‌ಗಳು ಸ್ಪರ್ಧಿಸಿದ್ದರು. ಇದರಲ್ಲಿ 63 ಪುರುಷರು, 54 ಮಹಿಳಾ ಸ್ಪರ್ಧಿಗಳಿದ್ದರು.

ಟೋಕಿಯೋ ಒಲಿಂಪಿಕ್ಸ್ ಇಣುಕುನೋಟ
ಜಾಗತಿಕ ಸಾಂಕ್ರಾಮಿಕ ರೋಗ ಕೋವಿಡ್-19ನಿಂದಾಗಿ 2020ರಲ್ಲಿ ಮುಂದೂಡಲ್ಪಟ್ಟ ಟೋಕಿಯೊ ಒಲಿಂಪಿಕ್ಸ್ ಅಂತಿಮವಾಗಿ ಜುಲೈ 23, 2021ರಂದು ಪ್ರಾರಂಭವಾಗಿದೆ. ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ವಿಶ್ವದ ವಿವಿಧ ಭಾಗದಿಂದ ಆಗಮಿಸಿರುವ 11000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಒಟ್ಟು 205 ರಾಷ್ಟ್ರಗಳಿಂದ ಕ್ರೀಡಾಳುಗಳು ಸ್ಪರ್ಧಿಸುತ್ತಿದ್ದಾರೆ. ಈ ಕ್ರೀಡಾಪುಟಗಳೆಲ್ಲ 17 ದಿನಗಳಲ್ಲಿ 50 ವಿಭಾಗಗಳಲ್ಲಿ 33 ಕ್ರೀಡೆಗಳಲ್ಲಿ 339 ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ. 32ನೇ ಒಲಿಂಪಿಯಾಡ್‌ ಎಂದು ಕರೆಯಲಾಗುವ ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ 300ಕ್ಕೂ ಹೆಚ್ಚು ಪದಕಗಳಿಗೆ ಸ್ಪರ್ಧೆಗಳು ನಡೆಯಲಿವೆ.

Story first published: Sunday, August 1, 2021, 19:27 [IST]
Other articles published on Aug 1, 2021
POLLS
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+