Tap to Read ➤

T20 World Cup: ಟೀಂ ಇಂಡಿಯಾ ಹೊಸ ಜೆರ್ಸಿ ಅನಾವರಣ

ಬಿಸಿಸಿಐ ಮುಂಬರುವ T20i ವಿಶ್ವಕಪ್‌ಗಾಗಿ ಭಾರತ ತಂಡಕ್ಕೆ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.
ಬಿಸಿಸಿಐ ಮುಂಬರುವ 2022ರ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಹಿರಂಗಪಡಿಸಿದೆ.
ಹೊಸ ಜೆರ್ಸಿಯನ್ನು ಅನಾವರಣಗೊಳಿಸುವ ಮೂಲಕ ಅಭಿಮಾನಿಗಳು ಕುತೂಹಲಕ್ಕೆ ತರೆ ಎಳೆಯಲಾಗಿದೆ.
MPL 2020 ರಲ್ಲಿ ಕಿಟ್ ಪ್ರಾಯೋಜಕರಾಗಿ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಇದು ಮೂರನೇ ಜರ್ಸಿಯಾಗಿದೆ.
ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ T20I ಪಂದ್ಯದಲ್ಲಿ ಭಾರತದ ಕ್ರಿಕೆಟಿಗರು ಈ ಜರ್ಸಿಯನ್ನು ಧರಿಸಲಿದ್ದಾರೆ.
ನಾಯಕ ರೋಹಿತ್‌ ಶರ್ಮಾ, ಹಾರ್ದಿಕ್‌ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಜರ್ಸಿಯ ಫಸ್ಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಅಷ್ಟೇ ಅಲ್ಲದೇ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್‌, ಶಫಾಲಿ ವರ್ಮಾ, ರೇಣುಕಾ ಸಿಂಗ್ ಈ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.
ನೂತನ ಜರ್ಸಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
more stories

 Shivam

Credits
@ BCCI twitter , Twitter , Twitter