Tap to Read ➤

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ರಾಬಿನ್ ಉತ್ತಪ್ಪ!

ಭಾರತದ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ ಅಂತಾರಾಷ್ಟ್ರೀಯ ಮೂರು ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.
Shivam
ಭಾರತ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಆರಂಭಿಕ ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ ಎಲ್ಲಾ ಸ್ವರೂಪದ ಭಾರತೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ಈ ಕುರಿತು ರಾಬಿನ್ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಭಾರತ ಹಾಗೂ ಕರ್ನಾಟಕ ತಂಡಗಳನ್ನು ಪ್ರತಿನಿಧಿಸಿರುವುದು ನನ್ನ ಪಾಲಿಗೆ ಹೆಮ್ಮೆಯ ವಿಷಯವಾಗಿದೆ.
ಮುಂದಿನ ದಿನಗಳಲ್ಲಿ ಜೀವನದ ಎರಡನೇ ಅಧ್ಯಾಯಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಉತ್ತಪ್ಪ ಬರೆದುಕೊಂಡಿದ್ದಾರೆ.
ಉತ್ತಪ್ಪ  2006ರಲ್ಲಿ ಇಂಗ್ಲೆಂಡ್‌ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ಫಾರ್ಮ ಕಳೆದುಕೊಂಡಿದ್ದ ಹಿನ್ನೆಲೆಯಲ್ಲಿ ರಾಬಿನ್ ತಂಡದಲ್ಲಿ ದೀರ್ಘಾವಧಿಗೆ ಸ್ಥಾನ ಪಡೆದುಕೊಂಡಿರಲಿಲ್ಲ
ಭಾರತದ ಪರ ಒಟ್ಟು 46 ಪಂದ್ಯಗಳಲ್ಲಿ 934ರನ್‌ಗಳಿಸಿದ್ದಾರೆ.
ಒಟ್ಟು 13 T20ಪಂದ್ಯಗಳಲ್ಲಿ 249ರನ್‌ ಗಳಿಸಿದ್ದಾರೆ.
ರಾಬಿನ್ ಉತ್ತಪ್ಪ ಭಾರತದ ಮೊದಲ ಟಿ20 ವಿಶ್ವಕಪ್‌ ವಿಜೇತ ತಂಡದ ಭಾಗವಾಗಿದ್ದರು.
Uthappa Stories